ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಿರತ ರೈತರನ್ನು ಗುರುವಾರ ಸಂಜೆ ಭೇಟಿ ಮಾಡಿದ ಶಾಸಕ ನಾರಾ ಭರತ್ ರೆಡ್ಡಿ ರೈತರ ಮನವಿಯನ್ನು ಪುರಸ್ಕರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಫೋನ್ ಮೂಲಕ ಮಾತಾಡಿ ಕೋರಿದರು. ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಬೆಳಿಗ್ಗೆಯಿಂದ ಧರಣಿ ಕೂತಿದ್ದರು. ಧರಣಿ ನಿರತ ರೈತರನ್ನು ಭೇಟಿ ಮಾಡಿದ ಶಾಸಕ ನಾರಾ ಭರತ್ ರೆಡ್ಡಿ ಅಹವಾಲು ಸ್ವೀಕರಿಸಿ ಸಚಿವರೊಂದಿಗೆ ಮಾತನಾಡಿದರು.
ರೈತ ಮುಖಂಡರಾದ ಮಾಧವ ರೆಡ್ಡಿ, ಮಲ್ಲಿಕಾರ್ಜುನ ರೆಡ್ಡಿ, ಲೇಪಾಕ್ಷಿ, ವೀರಭದ್ರ ರೆಡ್ಡಿ ಅವರ ನೇತೃತ್ವದಲ್ಲಿ ನೂರಾರು ರೈತರು ಧರಣಿ ಕೂತಿದ್ದರು. ಶಾಸಕರ ಭರವಸೆ ಮೇರೆಗೆ ಪ್ರತಿಭಟನಾ ಧರಣಿ ಹಿಂಪಡೆಯಲಾಯಿತು.